ನಮ್ಮ ಮಹಾವಿದ್ಯಾಲಯದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು ಇದರ ಸಹಯೋಗದೊಂದಿಗೆ ದಿನಾಂಕ 22 ಮತ್ತು 23 ನೇ ಜನವರಿ 2020 ರಂದು “ಉತ್ತರ ಕನ್ನಡ ಜಿಲ್ಲೆಯ ಚರಿತ್ರೆ ಮತ್ತು ಪುರಾತತ್ವದ ಕುರಿತು 2 ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.

    ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಜಿ ಶಾಸಕರು ಮತ್ತು ಎಂ.ಪಿ.ಇ. ಸೊಸೈಟಿಯ ಅಧ್ಯಕ್ಷರಾದ ಡಾ. ಎಂ. ಪಿ. ಕರ್ಕಿಯವರು  ನೆರವೇರಿಸಿದರು. ಎಂ.ಪಿ.ಇ. ಸೊಸೈಟಿಯ ಉಪಾಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಭಟ್ಟ ಶಿವಾನಿಯವರು “ವಿಜಯನಗರ ಅಧ್ಯಯನ 21 ನೇ ಸಂಪುಟ” ಗೃಂಥವನ್ನು ಬಿಡುಗಡೆಗೊಳಿಸಿದರು.

    ವಿಚಾರ ಸಂಕಿರಣದ ಸರ್ವಾಧ್ಯಕ್ಷತೆ ವಹಿಸಿದ ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ರಾಜರಾಮ ಹೆಗಡೆಯವರು ಆಶಯ ಭಾಷಣ ಮಾಡಿದರು. ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಎಂ. ಎಸ್. ಕೃಷ್ಣಮೂರ್ತಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಷಡಕ್ಷರಯ್ಯ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಚಾರ್ಯರಾದ ಡಾ. ವಿಜಯಲಕ್ಷ್ಮಿ ಎಂ. ನಾಯ್ಕರವರು ಅಧ್ಯಕ್ಷತೆ ವಹಿಸಿದ್ದರು. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರಾದ ಡಾ. ಆರ್. ಗೋಪಾಲರವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ. ಜಿ. ಎಸ್. ಹೆಗಡೆಯವರು ವಂದಿಸಿದರು. ಸಂಗೀತ ವಿಭಾಗದ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು. ಪ್ರೊ. ನಾಗರಾಜ ಹೆಗಡೆ ಅಪಗಾಲರವರು ಕಾರ್ಯಕ್ರಮವನ್ನು ನಿರ್ವಹಿಸಿದರು.

    ಎರಡು ದಿನ ನಡೆದ ಈ ವಿಚಾರ ಸಂಕಿರಣದಲ್ಲಿ ಡಾ. ಎಂ. ಎಸ್. ಕೃಷ್ಣಮೂರ್ತಿ, ಡಾ. ಷಡಕ್ಷರಯ್ಯ ಉತ್ತರ ಕನ್ನಡ ಚರಿತ್ರೆ ಮತ್ತು ಪುರತತ್ವದ ವಿವಿದ ವಿಷಯಗಳ ಕುರಿತು ಪ್ರಬಂಧ ಮಂಡಿಸಿದರು. ಇತಿಹಾಸ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡಿದ್ದರು. ಸುಮಾರು 250 ಕ್ಕೂ ಹೆಚ್ಚು ಪ್ರಾಧ್ಯಾಪಕರು ಮತ್ತು ಇತರರು ಈ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದು, ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.
ಎರಡನೇ ದಿನ ನಡೆದ ಸಮಾರೋಪ ಸಮಾರಂಭದಲ್ಲಿ ಎಂ.ಪಿ.ಇ. ಸೊಸೈಟಿಯ ಕಾರ್ಯದರ್ಶಿಗಳಾದ ಶ್ರೀ ಎಸ್. ಎಂ. ಭಟ್ಟರವರು ಮತ್ತು ಡಾ. ಸಿ. ಎಸ್. ವಾಸುದೇವನರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪ್ರಾಭಾರ ಪ್ರಾಚಾರ್ಯರಾದ ಪ್ರೊ. ಪಿ. ಎಂ. ಹೊನ್ನಾವರವರು ಅಧ್ಯಕ್ಷತೆ ವಹಿಸಿದ್ದರು.